ಅತ್ತಿತ್ತ ನೋಡದಿರು, ಅತ್ತು ಹೊರಳಾಡದಿರು
ನಿದ್ದೆ ಬರುವಳು ಹೊದ್ದು ಮಲಗು ಮಗುವೆ
ಜೋ ಜೋ ಜೋ ಜೋಒ (x2)
ಸುತ್ತಿ ಹೊರಳಾಡದಿರು, ಮತ್ತೆ ಹಠ ಹೂಡದಿರು
ನಿದ್ದೆ ಬರುವಳು ಕದ್ದು ಮಲಗು ಮಗುವೆ
ಜೋ ಜೋ ಜೋ ಜೋಒ (x2)
ಮಲಗು ಚೆಲ್ವಿನ ತೆರೆಯೆ, ಮಲಗು ನಲ್ಮೆಯ ಸೆರೆಯೇ
ಮಲಗು ತೊಟ್ಟಿಲ ಸಿರಿಯೇ ದೇವರಂತೆ
ಮಲಗು ಮುದ್ದಿನ ಗಿಣಿಯೆ, ಮಲಗು ಮುತ್ತಿನ ಮಣಿಯೆ
ಮಲಗು ಚಂದಿರನೂರ ಪೋಗುವೆಯಂತೆ – (x3)
ಅತ್ತಿತ್ತ ನೋಡದಿರು, ಅತ್ತು ಹೊರಳಾಡದಿರು
ನಿದ್ದೆ ಬರುವಳು ಹೊದ್ದು ಮಲಗು ಮಗುವೆ
ಜೋ ಜೋ ಜೋ ಜೋಒ (x2)
ತಾರೆಗಳ ಜರತಾರಿ ಅಂಗಿ ತೊಡಿಸುವರಂತೆ
ಚಂದಿರನ ತಂಗಿಯರು ನಿನ್ನ ಕರೆದು
ಹುವ ಮುಡಿಸುವರಂತೆ, ಹಲ ಕುಡಿಸುವರಂತೆ
ವೀಣೆ ನುಡಿಸುವರಂತೆ ಸುತ್ತ ನೆರೆದು (x3)
ಅತ್ತಿತ್ತ ನೋಡದಿರು, ಅತ್ತು ಹೊರಳಾಡದಿರು
ನಿದ್ದೆ ಬರುವಳು ಹೊದ್ದು ಮಲಗು ಮಗುವೆ
ಜೋ ಜೋ ಜೋ ಜೋಒ (x2)
ಬಣ್ಣ ಬಣ್ಣದ ಕನಸು ಕರಗುವುದು ಬಲು ಬೇಗ
ಹಗಲು ಬರುವನು ಬೆಳ್ಳಿ ಮುಗಿಲಾ ನಡುವೆ
ಚಿನ್ನದಮ್ಬರಿಯಲಿ ನಿನ್ನ ಕಳುಹುವರಾಗ
ಪಟ್ಟದಾನೆಯ ಮೇಲೆ ಪುಟ್ಟ ಮಗುವೆ (x3)
ಅತ್ತಿತ್ತ ನೋಡದಿರು, ಅತ್ತು ಹೊರಳಾಡದಿರು
ನಿದ್ದೆ ಬರುವಳು ಹೊದ್ದು ಮಲಗು ಮಗುವೆ
ಜೋ ಜೋ ಜೋ ಜೋಒ (x4)