ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು

ಹೂವು ಹಾಸಿಗೆ ಚಂದ್ರ ಚಂದನ, ಬಾಹು ಬಂಧನ ಚುಂಬನ
ಹೂವು ಹಾಸಿಗೆ ಚಂದ್ರ ಚಂದನ, ಬಾಹು ಬಂಧನ ಚುಂಬನ
ಬಯಕೆ ತೋಟದ ಬೇಲಿಯೊಳಗೆ ಕರಣಗಳದೀ ಈ ರಿಂಗಣ
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು
ಸಪ್ತಸಾಗರದಾಚೆಯೆಲ್ಲೋ ಸುಪ್ತಸಾಗರ ಕಾದಿದೆ
ಮೊಳೆಯದಲೆಗಳ ಮೂಕ ಮರ್ಮರ ಇಂದು ಇಲ್ಲಿಗು ಹಾಯಿತೆ
ಯಾವ ಮೋಹನ ಮುರಳಿ ಕರೆಯಿತು ದೂರ ತೀರಕೆ ನಿನ್ನನು
ಯಾವ ಬೃಂದಾವನವು ಸೆಳೆಯಿತು ನಿನ್ನ ಮಣ್ಣಿನ ಕಣ್ಣನು
ವಿವಶವಾಯಿತು ಪ್ರಾಣ ಹಾ!…….
ವಿವಶವಾಯಿತು ಪ್ರಾಣ ಹಾ ಪರವಶವು ನಿನ್ನೀ ಚೇತನ
ವಿವಶವಾಯಿತು ಪ್ರಾಣ ಹಾ ಪರವಶವು ನಿನ್ನೀ ಚೇತನ
ಇರುವುದೆಲ್ಲವ ಬಿಟ್ಟು ಇರದುದರೆಡೆಗೆ ತುಡಿವುದೇ ಜೀವನ